ಭಾರತೀಯ ಮಾರುಕಟ್ಟೆಯಲ್ಲಿ ಒಂದಾದ ಮೇಲೊಂದರಂತೆ ಬೇರೆ ಬೇರೆ ಮೊಬೈಲ್ ಕಂಪನಿಗಳು ತನ್ನ ಹೊಸ ಹೊಸ ಫೀಚರ್ ಗಳೊಂದಿಗೆ ಸ್ಮಾರ್ಟ್‌ಫೋನ್ ಗಳನ್ನು ಬಿಡುಗಡೆ ಮಾಡುತ್ತಲಿದೆ. ಇದೀಗ ಪ್ರಸಿದ್ಧ ವಿವೋ ಕಂಪೆನಿ ಮತ್ತೊಂದು ಹೊಸ ಸ್ಮಾರ್ಟ್ಫೋನನ್ನು ಬಿಡುಗಡೆ ಮಾಡುತ್ತಿದೆ. ಇತ್ತೀಚೆಷ್ಟೆ ವಿವೋ ವೈ21ಟಿ ಫೋನ್, ವಿವೋ ವಿ23 5ಜಿ ಹಾಗೂ ವಿವೋ ವಿ23 ಪ್ರೊ 5ಜಿ ಫೋನನ್ನು ಬಿಡುಗಡೆ ಮಾಡಿತ್ತು. ಇದೀಗ ವಿವೋ ವೈ33ಟಿ ಸ್ಮಾರ್ಟ್‌ಫೋನ್ ಲಾಂಚ್ ಮಾಡಿದೆ. ಕಳೆದ 10 ದಿನಗಳಲ್ಲಿ ವಿವೋ ಕಂಪನಿ ಭಾರತದಲ್ಲಿ ಬಿಡುಗಡೆ ಮಾಡಿದ 4ನೇ ಫೋನ್ ಇದಾಗಿದೆ.
ವಿವೋ ವೈ33ಟಿ ಸ್ಮಾರ್ಟ್‌ಫೋನ್ ವಾಟರ್‌ಡ್ರಾಪ್-ಶೈಲಿಯ ಡಿಸ್‌ಪ್ಲೇ ನಾಚ್ ಅನ್ನು ಹೊಂದಿದ್ದು, ಟ್ರಿಪಲ್ ರಿಯರ್ ಕ್ಯಾಮೆರಾವನ್ನು ಹೊಂದಿದೆ. ಇದರ ಪ್ರೊಸೆಸರ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ ಆಗಿದ್ದು, ಈ ಸ್ಮಾರ್ಟ್‌ಫೋನ್ 20,000 ರೂಪಾಯಿಗಿಂತಲೂ ಕಡಿಮೆಯಾಗಿದೆ. 8GB RAM ಮತ್ತು 128GB ಸ್ಟೋರೇಜ್ ಅನ್ನು ಹೊಂದಿದೆ. ಹಾಗೂ ಇದಕ್ಕೆ 18,990 ರೂಪಾಯಿ ಬೆಲೆ ನಿಗದಿಪಡಿಸಲಾಗಿದೆ. ಈಗಾಗಲೇ ಈ ಸ್ಮಾರ್ಟ್‌ಫೋನ್ ಇ-ಕಾಮರ್ಸ್ ವೇದಿಕೆಗಳಾದ ಅಮೆಜಾನ್, ಫ್ಲಿಪ್‌ಕಾರ್ಟ್, ವಿವೋ ಇಂಡಿಯಾ ಇ ಸ್ಟೋರ್, ಪೇಟಿಎಂ ಗಳಲ್ಲಿ ಲಭ್ಯವಿದ್ದು, ವಿವಿಧ ಆಫ್‌ಲೈನ್ ರಿಟೇಲ್ ಅಂಗಡಿಗಳಲ್ಲೂ ಲಭ್ಯವಿದೆ.
1,080×2,408 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯವನ್ನು ವಿವೋ ವೈ33ಟಿ ಸ್ಮಾರ್ಟ್‌ಫೋನ್ ಹೊಂದಿದೆ. 6.58 ಇಂಚಿನ ಫುಲ್ HD+ ಡಿಸ್‌ಪ್ಲೇ ಹೊಂದಿದ್ದು, ಇದರ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್, ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಡೆಪ್ತ್ ಸೆನ್ಸಾರ್, ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್, ಹಾಗೂ ಮ್ಯಾಕ್ರೋ ಶೂಟರ್ ಸಹ ಹೊಂದಿದೆ. ಸೆಲ್ಫಿ ಕ್ಯಾಮೆರಾ 16 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯವನ್ನು ಹೊಂದಿದೆ. ಈ ಸ್ಮಾರ್ಟ್‌ಫೋನ್ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ.