Sunday, June 8, 2025

ಕರಾವಳಿಯನ್ನು ತಾಲಿಬಾನ್ ಮಾಡಲು ಅವಕಾಶ ನೀಡುವುದಿಲ್ಲ: ನಳಿನ್ ಕುಮಾರ್ ಕಟೀಲ್

ಮಂಗಳೂರು:ಶಾಲೆ ಎನ್ನುವುದು ಸರಸ್ವತಿ ಮಂದಿರ. ಮಕ್ಕಳಿಗೆ ಅವಶ್ಯಕತೆ ಇರುವುದು ಶಿಕ್ಷಣ. ಶಾಲೆಯ ನಿಯಮಾನುಸಾರ ಶಿಕ್ಷಣ ಪಡೆಯುವುದು ಧರ್ಮ. ಅದರೊಳಗೆ ಬೇರೆ ಧರ್ಮ ತರುವುದು ಸರಿಯಲ್ಲ. ಯಾರಿಗೆ ಈ ಶಾಲೆಗಳಲ್ಲಿ ಕಲಿಯಲು ಮನಸ್ಸಿಲ್ಲವೋ ಅವರು ಬೇರೆ ದಾರಿ ಹುಡುಕಬಹುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದರು.

https://youtu.be/Kk6UN8wkNA8


ರಾಜ್ಯದಲ್ಲಿ ನಡೆಯುತ್ತಿರುವ ಹಿಜಾಬ್ ವಿವಾದದ ಕುರಿತು ಮಂಗಳೂರಿನಲ್ಲಿ ಶನಿವಾರ ಪ್ರತಿಕ್ರಿಯಿಸಿರುವ ನಳಿನ್ ಕುಮಾರ್ ಕಟೀಲ್ ರಾಜ್ಯದಲ್ಲಿ ಬಿಜೆಪಿ ನೇತೃತ್ವದ ಸರ್ಕಾರ ಇದೆ. ಶಾಲೆಯ ನಿಯಮದಡಿಯಲ್ಲಿ ಶಿಕ್ಷಣವನ್ನು ಕಲಿಯಬೇಕು. ಕರಾವಳಿಯನ್ನು ತಾಲಿಬಾನ್ ಮಾಡಲು ಅವಕಾಶ ನೀಡುವುದಿಲ್ಲ. ಈ ಬಗ್ಗೆ ನಮ್ಮ ಸರ್ಕಾರ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಿದೆ ಎಂದರು.


ಇನ್ನು, ಪ್ರಕರಣದ ಬಗ್ಗೆ ಸಿದ್ದರಾಮಯ್ಯ ಅವರು ನೀಡಿರುವ ಹೇಳಿಕೆಯನ್ನು ನೋಡಿದ್ದೇನೆ. ಅವರು ಮುಖ್ಯಮಂತ್ರಿಯಾಗಿದ್ದಾಗ ಟಿಪ್ಪು ಜಯಂತಿ ನಡೆಸಿ ಸಾಮರಸ್ಯ ಹಾಳುಮಾಡಿದ್ದಾರೆ. ಶಾದಿ ಭಾಗ್ಯದ ಹೆಸರಿನಲ್ಲಿ ಕೆಲವೇ ಕೆಲವು ಸಮುದಾಯಗಳಿಗೆ ಯೋಜನೆ ನೀಡಿದ್ದರು. ಇದೀಗ ಅವರು ಹಿಜಾಬ್ ವಿಚಾರದ ಬಗ್ಗೆ ಮಾತನಾಡುತ್ತಿದ್ದಾರೆ. ಸಿದ್ದರಾಮಯ್ಯನವರು ಮಾತನಾಡುವಾಗ ಬಹಳ ಎಚ್ಚರಿಕೆಯಿಂದ ಇರಬೇಕು. ಹಿಜಾಬ್ ವಿಚಾರ ಈಗ ನ್ಯಾಯಾಲಯದಲ್ಲಿದೆ, ಕೋರ್ಟ್ನಿಂದ ಏನು ನಿರ್ದೇಶನ ಬರಲಿದೆ ಎಂದು ಕಾದು ನೋಡುತ್ತೇವೆ ಎಂದು ಹೇಳಿದರು.

Editorial Staff
Editorial Staff
ರಾಜ್ಯದ ವಾಸ್ತವಿಕ ಸಂಗತಿಗಳನ್ನು,ವಿಶೇಷ ಕುತೂಹಲಕಾರಿ ಮಾಹಿತಿ,ಲೇಖನಗಳನ್ನು ಲೋಕಕ್ಕೆ ನೀಡುವುದೇ ನಮ್ಮ ಉದ್ದೇಶ. ನೇರ,ನಿಷ್ಪಕ್ಷಪಾತ ಪತ್ರಿಕೋದ್ಯಮವೇ ನಮ್ಮ ಆದ್ಯತೆ.
0 0 votes
Article Rating
Subscribe
Notify of
guest
0 Comments
Inline Feedbacks
View all comments

Stay Connected

2,500FansLike
1,333FollowersFollow
3,000SubscribersSubscribe

Latest Articles