Sunday, June 8, 2025

ರಸ್ತೆ ಅಪಘಾತ: ದೇವಸ್ಥಾನದಿಂದ ಮನೆಗೆ ಮರಳುತ್ತಿದ್ದ ಮಹಿಳೆ ಸಾವು

ಕಾರ್ಕಳ: ಬೈಕ್‌ಗೆ ಹಿಂಬದಿಯಿಂದ ಈಚರ್ ಟೆಂಪೋ ಡಿಕ್ಕಿ ಹೊಡೆದ ಪರಿಣಾಮ ಮಹಿಳೆಯೋರ್ವರು ಸಾವನ್ನಪ್ಪಿರುವ ಘಟನೆ ಶಿವತಿಕೆರೆ ಪೆಟ್ರೋಲ್ ಬಂಕ್ ಬಳಿ ನಡೆದಿದೆ.


ಮಹಿಳೆ ದೇವಸ್ಥಾನದಿಂದ ಮನೆಗೆ ತೆರಳುತ್ತಿರುವ ಸಂದರ್ಭ ಈ ಘಟನೆ ಸಂಭವಿಸಿದ್ದು, ಮೃತರನ್ನು ಜಯಂತಿ ರಾವ್(70) ಎಂದು ಗುರುತಿಸಲಾಗಿದೆ. ಮಹಿಳೆ ತನ್ನ ಸಂಬಂಧಿಯ ಬೈಕಿನ ಹಿಂಭಾಗದಲ್ಲಿ ಕುಳಿತು ಮನೆಗೆ ಬರುತ್ತಿದ್ದರು, ಈ ವೇಳೆ ಈಚರ್ ಟೆಂಪೋ ಹಿಂಬದಿಯಿಂದ ವೇಗವಾಗಿ ಬಂದು ಮಹಿಳೆಯ ಕಾಲಿಗೆ ಡಿಕ್ಕಿ ಹೊಡೆದ ಪರಿಣಾಮ ಅವರು ರಸ್ತೆಗೆ ಬಿದ್ದಿದ್ದರಿಂದ ತಲೆಯ ಭಾಗಕ್ಕೆ ಗಂಭಿರ ಗಾಯಗಳಾಗಿದ್ದವು.


ಗಾಯಾಳುವನ್ನು ಕಾರ್ಕಳ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ, ಚಿಕಿತ್ಸೆ ಫಲಕಾರಿಯಾಗದೇ ಮಹಿಳೆ ಮೃತಪಟ್ಟಿದ್ದಾರೆ. ಘಟನೆ ಸಂಬಂಧ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Editorial Staff
Editorial Staff
ರಾಜ್ಯದ ವಾಸ್ತವಿಕ ಸಂಗತಿಗಳನ್ನು,ವಿಶೇಷ ಕುತೂಹಲಕಾರಿ ಮಾಹಿತಿ,ಲೇಖನಗಳನ್ನು ಲೋಕಕ್ಕೆ ನೀಡುವುದೇ ನಮ್ಮ ಉದ್ದೇಶ. ನೇರ,ನಿಷ್ಪಕ್ಷಪಾತ ಪತ್ರಿಕೋದ್ಯಮವೇ ನಮ್ಮ ಆದ್ಯತೆ.
0 0 votes
Article Rating
Subscribe
Notify of
guest
0 Comments
Inline Feedbacks
View all comments

Stay Connected

2,500FansLike
1,333FollowersFollow
3,000SubscribersSubscribe

Latest Articles