ಪುತ್ತೂರು: ರೈಲು ಬಡಿದು ಯುವಕನೋರ್ವ ಮೃತಪಟ್ಟ ಘಟನೆ ಪುತ್ತೂರಿನ ಕಬಕ ಸಮೀಪದ ಮಿತ್ತೂರಿನಲ್ಲಿ ನಡೆದಿದೆ.
ಕಡಬ ತಾಲೂಕಿನ ಕೊಯಿಲ ಗ್ರಾಮದ ನಿವಾಸಿ ಕಾರ್ತಿಕ್(24) ಮೃತ ದುರ್ದೈವಿ ಯುವಕ. ಇವರು ಮಿತ್ತೂರುನಲ್ಲಿ ಕಿರು ಸೇತುವೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವೇಳೆ ಮುಂಭಾಗದಿಂದ ಬಂದ ರೈಲು ಬಡಿದು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎನ್ನಲಾಗಿದೆ.
ಮೇಸ್ತ್ರಿ ಕೆಲಸ ಮಾಡುತ್ತಿದ್ದ ಕಾರ್ತಿಕ್ ಕೆಲಸದ ನಿಮಿತ್ತ ಮಂಗಳೂರಿಗೆ ಬಂದಿದ್ದರು. ಬಸ್ ಸಿಗದ ಕಾರಣ ಮಿತ್ತೂರಿನ ಕಿರು ಸೇತುವೆ ಮೂಲಕ ಉಪ್ಪಿನಂಗಡಿ ಸಂಪರ್ಕಿಸಲು ಸೇತುವೆಯಲ್ಲಿ ನಡೆದುಕೊಂಡು ಹೋಗುತ್ತಿದ್ದರು. ಈ ಸಂದರ್ಭ ಅಪಘಾತ ಸಂಭವಿಸಿರಬಹುದೆಂದು ರೈಲ್ವೆ ಪೊಲೀಸರು ಶಂಕಿಸಿದ್ದಾರೆ. ಇನ್ನು ಈ ಬಗ್ಗೆ ಮಂಗಳೂರು ರೈಲ್ವೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.